LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸದೂಟ ಸೇವಿಸಿ 20 ಮಂದಿ ಅಸ್ವಸ್ಥ..

K2kannadanews.in


https://youtu.be/6-JcE7tdxAw?si=97AMW_gKcnqs5ryh

Meat sick ಲಿಂಗಸೂಗೂರು : ದೇವರ ಕಾರ್ಯಕ್ಕೆ ಮಾಡಿದ ಮಾಂಸದೂಟ ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ಪರಂಪೂರ ತಾಂಡಾದಲ್ಲಿ ನಡೆದಿದೆ.


ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ. ದೇವರ ಕಾರ್ಯಕ್ಕೆಂದು ಮಾಡಿದ್ದ ಮಾಂಸಾಹಾರ ಸೇವಿಸಿದ್ದ ನಂತರ ಹಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಪರಿಣಾಮ 20ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಬುಧವಾರ ಮಧ್ಯಾಹ್ನದ ಊಟದ ನಂತರ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಮಕ್ಕಳು, ಹಿರಿಯರು ಸೇರಿ ಸುಮಾರು 10ಜನ ಹೆಚ್ಚು ಅಸ್ವಸ್ಥರಾಗಿದ್ದಾರೆ.


https://youtu.be/OK0SeYw3U4w?si=1KGbsdUNtHESIn0f

ತೀವ್ರ ಅಸ್ವಸ್ಥಗೊಂಡ 10 ಜನರನ್ನು ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದವರಿಗೆ ಗ್ರಾಮದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST