LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖಮುಖಿ ಬಸುಗಳ ಡಿಕ್ಕಿ : ಚಿಕಿತ್ಸೆ ಪಾಲಿಸದೆ 2 ವಿದ್ಯಾರ್ಥಿಗಳು ಸಾವು

K2kannadanews.in

Accident News ರಾಯಚೂರು : ಶಿಕ್ಷಕರ ದಿನಾಚಣೆ ಹಿನ್ನೆಲೆ ಖುಷಿಯಿಂದ ಹೊರಟಿದ್ದ ವಿದ್ಯಾರ್ಥಿಗಳು, ಜವರಾಯನ ಪಾದ ಸೇರಿದ ದುರ್ಘಟನೆಯೊಂದು ರಾಯಚೂರು ಜಿಲ್ಲೆಯಲ್ಲಿ ಜರುಗಿದೆ. ಶಾಲೆಗೆ ಹೋದ ಮಕ್ಕಳು, ಶವವಾದ ಮಾಹಿತಿ ತಿಳಿದ ಪೊಷಕರ ಆಕ್ರಂದನ ಮುಗಿಲು ಮುಟ್ಟಿತ್ತು, ಘಟನೆಗೆ ಸ್ಪಂದಿಸಿದ ಸಿಎಂ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.

https://youtu.be/-NLaA5KSS40?si=rexJoxx69lx7G7PB

ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಸಮರ್ಥ (7) ಹಾಗೂ ಶ್ರೀಕಾಂತ ( 12) ಚಿಕಿತ್ಸೆ ಫಲಕಾರಿಯಾಗದೆ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಿದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಘಟನೆ ಕುರಿತು ಮಾತನಾಡಿರುವ
ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಸಿಎಂ ದೂರವಾಣಿ ಕರೆಯಲ್ಲಿ ಈ ಕುರಿತು ಮಾತನಾಡಿದ್ದಾರೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಪರಿಹಾರ ನೀಡಲು ಸೂಚಿಸಿದ್ದಾರೆ. ಕೂಡಲೇ ಪರಿಹಾರ ಒದಗಿಸಲು ಆದೇಶ ಮಾಡಿದ್ದಾರೆ ಅಂತ ಹೇಳಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST