LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿರ್ಮಾಣ ಹಂತದ ಕಟ್ಟಡದ ಮೆಟ್ಟಿಲು ಕುಸಿದು ಬಿದ್ದು ದಂಪತಿಗಳ ದಾರುಣ ಸಾವು

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿ ದಂಪತಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ದ್ಯಾವಪ್ಪ ಸೂಗುರು (38) ಹಾಗೂ ಅವರ ಪತ್ನಿ ಶಿವಮ್ಮ (32) ಎಂದು ಗುರುತಿಸಲಾಗಿದೆ. ಇಬ್ಬರೂ ಗೌಂಡಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಯಲಗಟ್ಟ ಗ್ರಾಮದ ಪಕ್ಕದ ಮನೆಯಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದರಲ್ಲಿ ಮೆಟ್ಟಿಲು ನಿರ್ಮಾಣ ಮಾಡಲಾಗಿತ್ತು. ದ್ಯಾವಪ್ಪ ಹಾಗೂ ಶಿವಮ್ಮ ದಂಪತಿಗಳು ಆ ಮನೆಯಲ್ಲಿ ಗೌಂಡಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮೆಟ್ಟಿಲು ಕುಸಿದು ಬಿದ್ದಿದೆ. ಮೆಟ್ಟಿಲು ಕುಸಿದು ನೇರವಾಗಿ ಅವರ ಮೇಲೆ ಬಿದ್ದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.



ಸ್ಥಳೀಯರ ಪ್ರಕಾರ, ಆ ಮೆಟ್ಟಿಲನ್ನು ಪಿಲ್ಲರ್‌ಗಳಿಲ್ಲದೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಇದರಿಂದಾಗಿ ಮೆಟ್ಟಿಲು ಕುಸಿದು ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಘಟನೆ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಹಟ್ಟಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.



ನಂತರ ಮೃತ ದೇಹಗಳನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ. ಈ ದುರ್ಘಟನೆ ಗ್ರಾಮದಲ್ಲಿ ಶೋಕದ ವಾತಾವರಣವನ್ನುಂಟು ಮಾಡಿದೆ.

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST