LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಟ್ಟಿ ಚಿನ್ನದ ಗಣಿ ಮುಂದೆ ಮದ್ದು ಗಳು ಪತ್ತೆ : ಬ್ಲಾಸ್ಟಿಂಗ್ ಪ್ಲಾನ್ ಶಂಕೆ, ಪಟ್ಟಣದಲ್ಲಿ ಆತಂಕ

.

https://youtu.be/T43kQhcuFMo?si=eBiQ3D8Cq6w_TMx8

ರಾಯಚೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶದ ಏಕೈಕ ಚಿನ್ನ ಉತ್ಪಾದನಾ ಸಂಸ್ಥೆ ಹಟ್ಟಿ ಚಿನ್ನದ ಗಣಿ ಕಂಪನಿ ಮುಖ್ಯ ದ್ವಾರದ ಮುಂಭಾಗದಲ್ಲಿ 16 ಜಿಲಿಟಿನ್ ಸ್ಪೋಟಕ ಕಡ್ಡಿಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಗಣಿ ಪ್ರವೇಶ ದ್ವಾರದ ಸಮೀಪವೇ ಹಾನಿಕಾರಕ ಸ್ಪೋಟಕ ವಸ್ತುಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಗಣಿ ಬ್ಲಾಸ್ಟ್ ಮಾಡಲು ಯಾರಾದರೂ ಸಂಚು ರೂಪಿಸಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಮೂಲಗಳ ಪ್ರಕಾರ, ಪತ್ತೆಯಾದ ಜಿಲಿಟಿನ್ ಕಡ್ಡಿಗಳು ಕಂಪನಿಗೆ ಸೇರಿರುವ ಅಧಿಕೃತ ಸ್ಪೋಟಕ ಮದ್ದುಗಳಲ್ಲ ಎಂದು ಪ್ರಾಥಮಿಕ ಪರಿಶೀಲನೆ ವೇಳೆ ತಿಳಿದುಬಂದಿದೆ. ಇದರಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಉದ್ದೇಶಪೂರ್ವಕವಾಗಿ ಹೊರಗಿನಿಂದ ತರಲಾಗಿರಬಹುದು ಎಂಬ ಅನುಮಾನ ಕಾಡುತ್ತಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಗಣಿ ದ್ವಾರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಂಕಾಸ್ಪದ ವಸ್ತುಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಈ ಬೆಳವಣಿಗೆಯಿಂದ ಗಣಿ ಕಾರ್ಮಿಕರು ಹಾಗೂ ಹಟ್ಟಿ ಪಟ್ಟಣದ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಪ್ರತಿಷ್ಠಿತ ಹಾಗೂ ಭದ್ರತಾ ದೃಷ್ಟಿಯಿಂದ ಸಂವೇದನಾಶೀಲವಾಗಿರುವ ಚಿನ್ನದ ಗಣಿ ಪ್ರದೇಶದಲ್ಲಿ ಇಂತಹ ಸ್ಪೋಟಕ ವಸ್ತುಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಸ್ಪೋಟಕಗಳನ್ನು ಯಾರಿಂದ ಮತ್ತು ಯಾವ ಉದ್ದೇಶಕ್ಕಾಗಿ ಅಲ್ಲಿ ಇಡಲಾಗಿದೆ ಎಂಬುದರ ಕುರಿತು ತನಿಖೆ ಮುಂದುವರೆದಿದೆ. ಘಟನೆ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದ್ದು, ಸಂಪೂರ್ಣ ಸತ್ಯಾಸತ್ಯತೆ ತನಿಖೆಯ ನಂತರವೇ ತಿಳಿಯಲಿದೆ
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST