K2kannadanews.in
Collapsed classroom wall ವಡೋಧರಾ : ಮಳೆಗಾಲ ಆರಂಭವಾಗಿದೆ. ಅವಘಡಗಳು ಹೇಗೆ ಎಲ್ಲಿ ಸಂಭವಿಸುತ್ತೆ ಗೊತ್ತಿಲ್ಲ. ಇಲ್ಲೊಂದು ಘಟನೆ ಜರುಗಿದ್ದು, ಮಕ್ಕಳಿದ್ದ ತರಗತಯ ಗೋಡೆ ಹಠಾತ್ತನೆ ಕುಸಿದು(Wall Collapsed) ಬಿದ್ದಿದೆ. ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ.
https://youtu.be/JUekrD-hFPk?si=JYke2UKieJqYjLYj
ಘಟನೆಯು ವಡೋಧರಾದ ಶ್ರೀ ನಾರಾಯಣ ವಿದ್ಯಾಲಯದಲ್ಲಿ ನಡೆದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ(Viral Video). ಅವಶೇಷದಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ವಿದ್ಯಾರ್ಥಿ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ವಿರಾಮದ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಗೋಡೆ ಕುಸಿದಾಗ ಹೆಚ್ಚಿನ ವಿದ್ಯಾರ್ಥಿಗಳು ತರಗತಿಯ ಹೊರಗೆ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ. ಇಂತಹ ದುರಸ್ತಿ ಮಾಡಿಸದೇ ನಿರ್ಲಕ್ಷ್ಯ ವಹಿಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ಪಾಲಕರು ಶಾಲೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://youtu.be/_QEOeJkZmZ8?si=1jnIB8E1Qlq8iccz