LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ : ಮಸ್ಕಿ ಬಳಿ ಬೈಕಿಗೆ ಡಿಕ್ಕಿ ಹೊಡೆದ ಸಾರಿಗೆ ಬಸ್ ಸವಾರ ಸಾವು

ಭೀಕರ ಅಪಘಾತ : ಮಸ್ಕಿ ಬಳಿ ಬೈಕಿಗೆ ಡಿಕ್ಕಿ ಹೊಡೆದ ಸಾರಿಗೆ ಬಸ್ ಸವಾರ ಸಾವು

ಮಸ್ಕಿ : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.



ಕಲಬುರ್ಗಿ ವಿಭಾಗಕ್ಕೆ ಸೇರಿದ ಸಾರಿಗೆ ಬಸ್ ಮಸ್ಕಿ ಕಡೆಗೆ ತೆರಳುತ್ತಿದ್ದ ವೇಳೆ, ಮಸ್ಕಿಯಿಂದ ಮುಧೋಳ ಕಡೆಗೆ ಬರುತ್ತಿದ್ದ ಬೈಕ್ ರಸ್ತೆ ಕ್ರಾಸ್ ಮಾಡುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವೇಗವಾಗಿ ಬಂದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಂಜೀವ್ ರಡ್ಡಿ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದು ಕೂಡಲೇ ಮಸ್ಕಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಅಪಘಾತಕ್ಕೀಡಾದ ಬೈಕ್ ಮತ್ತು ಸಾರಿಗೆ ಬಸ್ಸನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಸ್ಕಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಪ್ರಕರಣ ದಾಖಲಿಸಿ ತನಿಖೆ ಮುಂದುವರಿದಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST