LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೇಣುಬಿಗಿದುಕೊಂಡು ರಾಯಚೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.!

K2kannadanews.in


Crime News ಮಡಿಕೇರಿ : ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ರಾಯಚೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ  ನಡೆದಿದೆ.


https://youtu.be/cS-ABizbZL4?si=9mXdxyghr4blqQ_k

ರಾಯಚೂರು ಮೂಲದ ಮಹಾಂತಪ್ಪ ಎಂಬವರ ಪುತ್ರಿ,  ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಈಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದ ಸ್ನೇಹಿತರಿಗೆ ಸಿಹಿ ಹಂಚಿದ್ದಳೆನ್ನಲಾಗಿದೆ. ಬುಧವಾರವೂ ತರಗತಿಗೆ ಆಗಮಿಸಿದ ಆಕೆ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ. ಈ ವೇಳೆ ಕೊಠಡಿಯಲ್ಲಿ ಯಾರೂ ಇರಲಿಲ್ಲ.


ನಂತರ 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು.‌ ಎಷ್ಟೇ ಕೂಗಿದರೂ ಆಕೆ ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ, ಬಾಗಿಲು ತೆಗೆದು ನೋಡಿದಾಗ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೋಚರಿಸಿದೆ. ನಂತರ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿದ್ದು, 'ಆರು ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದಿದ್ದಾಳೆ ಎನ್ನಲಾಗುತ್ತಿದೆ. ಪೊನ್ನಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST