K2kannadanews.in
Mahanagara palike ರಾಯಚೂರು : ಇಂದು ಕಲ್ಬುರ್ಗಿಯಲ್ಲಿ (Kalburgi) ನಡೆದ ಸಚಿವ ಸಂಪುಟ (Cabinet meeting) ಸಭೆಯಲ್ಲಿ ರಾಯಚೂರು ನಗರಸಭೆಯನ್ನು (CMC) ಮಹಾನಗರ ಪಾಲಿಕೆಯಾಗಿ ಕಾಂಗ್ರೆಸ್ ಸರ್ಕಾರ ಮೇಲ್ದರ್ಜೆಗೆರಿಸಿ (upgrade) ಘೋಷಣೆ ಮಾಡಲಾಗಿದೆ ಎನ್ನಲಾಗಿದೆ.
https://youtu.be/rkjJLPeBvbE?si=3NJ7Zh9bQElZh8Gk
ಹಲವು ವರ್ಷಗಳಿಂದ ರಾಯಚೂರು ನಗರಸಭೆಯನ್ನು ಮೇಲ್ದರ್ಜೆಗೆ ಏರಿಸಬೇಕು ಎಂಬ ಒತ್ತಾಯಗಳು ಇದ್ದವು. ಇದಕ್ಕೆ ಸಂಬಂದಿಸಿದಂತೆ ಎಲ್ಲಾ ರೀತಿಯ ಯೋಜನೆಗಳನ್ನು ರೂಪಿಸಿ ಕಾರ್ಯಯೋಜನೆ ರೂಪಿಸಲಾಗಿತ್ತು. ಆರ್ಥಿಕ ಇಲಾಖೆಗೆ ಅನುಮತಿಗಾಗಿ ಕಳುಹಿಸಲಾಗಿತ್ತು. ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಕಾಂಗ್ರೆಸ್ ಸರ್ಕಾರ ಮೇಲ್ದರ್ಜೆಗೆರಿಸಿ ಘೊಷಣೆ ಮಾಡಲಾಗಿದೆ ಎನ್ನಲಾಗಿದೆ.