LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಸ್ಕಿ : ಬೆಂಡೆಕಾಯಿ ಪಲ್ಯ ಜೊತೆ ರೊಟ್ಟಿ ಸೇವನೆ, ಏಳು ಜನ ಅಸ್ವಸ್ಥ!

K2kannadanews.in

Contaminated Water ಮಸ್ಕಿ : ರೊಟ್ಟಿ, ಬೆಂಡೆಕಾಯಿ ಪಲ್ಯ ಸೇವಿಸಿ ಒಂದೇ ಕುಟುಂಬದ 7 ಮಂದಿ ತೀವ್ರ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾದ ಘಟನೆ ಅಮೀನಗಡ ಗ್ರಾಮದಲ್ಲಿ ನಡೆದಿದೆ.

https://youtu.be/Fzfgz5dS6c4?si=PVBkPO6bO9T6iodq

ರಾಯಚೂರು ಜಿಲ್ಲೆಯ ಮಸ್ಕಿ(Maski) ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ಘಟನೆ ನಡೆದಿದೆ. ಲಕ್ಷ್ಮೀ, ಮಳಾಪ್ಪ, ಬಸಲಿಂಗಪ್ಪ, ಗೌರಮ್ಮ, ಗುರುಬಸಮ್ಮ ಹಾಗೂ ಮಲ್ಲಿಕಾರ್ಜುನ ಸೇರಿದಂತೆ ಒಟ್ಟು 7 ಜನರಲ್ಲಿ ತೀವ್ರ ವಾಂತಿ-ಭೇದಿ ಕಾಣಿಸಿಕೊಂಡಿದೆ. ಬೆಳಗ್ಗೆ ಎಲ್ಲರೂ ಹೊಲದಲ್ಲೇ ಕುಳಿತು ಒಟ್ಟಾಗಿ ಊಟ ಮಾಡಿದ್ದರು. ಊಟದ ಬಳಿಕ ಏಕಾಏಕಿ ಅಸ್ವಸ್ಥರಾಗಿದ್ದಾರೆ.

ಊಟ ಆಗುತ್ತಿದ್ದಂತೆ ಏಳು ಜನರ ಆರೋಗ್ಯದಲ್ಲಿ ಏರುಪೇರಾಗಿ, ವಾಂತಿ ಬೇದಿ ಕಾಣಿಸಿಕೊಂಡಿದ್ದು, ಕೂಡಲೆ ಲಿಂಗಸಗೂರು ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅಸ್ವಸ್ಥರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಸ್ಥಳಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲುಷಿತ ನೀರಿನಿಂದಾಗಿಯೇ ಹೀಗೆ ಆಗಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗುತ್ತಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST