LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೀಪಾವಳಿ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆ..

K2kannadanews.in

Special train ರಾಯಚೂರು : ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಬೆಂಗಳೂರು, ರಾಯಚೂರು ಹಾಗೂ ಕಲಬುರಗಿ ಮಧ್ಯೆ 2 ಟ್ರಿಪ್ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.

https://youtu.be/DKz4ZCK6d5o?si=tJGdoBqvQs3hWs9Y

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್- ರಾಯಚೂರು- ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ.

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 30 ಮತ್ತು ನವೆಂಬರ್ 2ರಂದು ಸಂಚರಿಸಲಿದೆ. ಕಲಬುರಗಿ ಎಸ್​ಎಂವಿಟಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್, ಕಲಬುರಗಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST