LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಾರಿ ಕಾರು ಮುಖಾಮುಖಿ ಡಿಕ್ಕಿ : ಸ್ಥಳದಲ್ಲೆ ಮೂರು ಸಾವು..

K2kannadanews.in

https://youtu.be/I4HR-S4rg0k?si=urkAn1YsVGlxBJ8r

Accident News ರಾಯಚೂರು : ಕಾರು ಮತ್ತು ಲಾರಿ (Car & lorry) ನಡುವೆ ಮುಖಾಮುಖಿ ಡಿಕ್ಕಿ (accident) ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟ (2 spot death) ಘಟನೆ ಕಲ್ಲೂರು ಗ್ರಾಮದ ಬಳಿ ನಡೆದಿದೆ.

ರಾಯಚೂರು (Raichur) ಜಿಲ್ಲೆಯ ಸಿರವಾರ (Sirawar) ತಾಲೂಕಿನ ಕಲ್ಲೂರು (Kalluru) ಗ್ರಾಮದ ಬಳಿ ಘಟನೆ ನಡೆದಿದ್ದು. ಮಾನ್ವಿ (Manvi) ಪಟ್ಟಣದ ಕೋನಾಪುರಪೇಟೆಯ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಪರಿಪೂರ್ಣ ಮಾಹಿತಿ ದೊರೆತಿಲ್ಲ. ರಾಯಚೂರಿನಿಂದ ಮಾನ್ವಿ ಕಡೆಗೆ ಹೊರಟಿದ್ದ ಶಿಫ್ಟ್ ಕಾರಿಗೆ ಮಾನ್ವಿಯಿಂದ ರಾಯಚೂರು ಕಡೆಗೆ ಬರುತ್ತಿದ್ದ ಲಾರಿಯು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಈ ಒಂದು ಭೀಕರ ಅಪಘಾತದಲ್ಲಿ ಶಿಫ್ಟ್ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

https://youtu.be/xdYNTbMgJrc?si=TaGNChmAq5PGpZfd

ಅಪಘಾತವಾಗುತ್ತಿದ್ದಂತೆ ರಸ್ತೆಯ ಎರಡು ಭಾಗದಲ್ಲಿ ಕಿಲೋಮಿಟರ್ ಕಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತೆ ಆಗಿದ್ದು, ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST