LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟಿಪ್ಪರ್ ದ್ವಿಚಕ್ರ ವಾಹನ ಮುಖಾ ಮುಖಿ ಡಿಕ್ಕಿ ಬೈಕ್ ಸಾವು ಚಾಲಕ ಪರಾರಿ

https://youtu.be/57LTofH0eOI?si=gCSOfWTJi145DbyV

ಟಿಪ್ಪರ್ ಹಾಗೂ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಸಮೀಪ ನಡೆದಿದೆ. ಅಪಘಾತದಲ್ಲಿ ಚಡಕಲ್ ಗುಡ್ಡ ಗ್ರಾಮದ ನಿವಾಸಿ, 32 ವರ್ಷದ ಬಸವರಾಜ್ ಎಂಬ ಯುವಕ ಸಾವನ್ನಪ್ಪಿದ್ದಾನೆ.

ಮೃತ ಬಸವರಾಜ್ ಸಿರವಾರದಿಂದ ಪಾಮನಕಲ್ಲೂರಿಗೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಲಿಂಗಸುಗೂರಿನಿಂದ ರಾಯಚೂರು ಕಡೆಗೆ ಹೊರಟಿದ್ದ ಟಿಪ್ಪರ್ ಲಾರಿ ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸವರಾಜ್ ರಸ್ತೆ ಮೇಲೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳೀಯರ ಪ್ರಕಾರ, ಟಿಪ್ಪರ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಮಾಹಿತಿ ತಿಳಿದು ತಕ್ಷಣವೇ ಕವಿತಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಲಾಗಿದೆ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಟಿಪ್ಪರ್ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST