LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಾರು ಡಿಕ್ಕಿ : ಇಬ್ಬರ ದಾರುಣ ಸಾವು..

K2kannadanews.in


ಲಿಂಗಸೂಗೂರು : ಕೆಎಸ್‌ಆರ್‌ಟಿಸಿ ಬಸ್ಸಿಗೆ (Ksrtc Bus) ಕಾರು ಡಿಕ್ಕಿ (Road Accident) ಹೊಡೆದ ಪರಿಣಾಮ ಕಾರಿನಲ್ಲಿದ್ದ, ಇಬ್ಬರು  ಯುವಕರು ಮೃತಪಟ್ಟ ಘಟನೆ ಅಡವಿ ಬಾವಿ ಗ್ರಾನದಲ್ಲಿ ಜರುಗಿದೆ.


ರಾಯಚೂರು ಜಿಲ್ಲೆಯ (Raichur) ಲಿಂಗಸುಗೂರು ತಾಲೂಕಿನ ಅಡವಿಬಾವಿ ಕ್ರಾಸ್ ಬಳಿ ತಡರಾತ್ರಿ ಅಪಘಾತ ನಡೆದಿದ್ದು, ಕುಡಿದು ಕಾರು ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವಿರೇಶ್ (25), ಚನ್ನಬಸವ (24) ಮೃತ ದುರ್ದೈವಿಗಳು. ಲಿಂಗಸಗೂರು ಹೊರವಲಯದ ಕರಡಕಲ್ ಗ್ರಾಮದ ನಿವಾಸಿಗಳಾದ ಇವರಿಬ್ಬರು, ನಾರಾಯಣಪುರ ಜಲಾಶಯದತ್ತ ಹೊರಟ್ಟಿದ್ದರು. ಇದೇ ವೇಳೆ ಮುದ್ದೇಬಿಹಾಳ ಕಡೆಯಿಂದ ಲಿಂಗಸಗೂರು ಕಡೆ ಬಸ್ ಬರುತ್ತಿತ್ತು.‌ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದರಿಂದ ಈ ವೇಳೆ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿಯಾಗಿದೆ.


[video width="640" height="364" mp4="https://k2kannadanews.in/wp-content/uploads/2024/07/VID-20240729-WA0003.mp4"][/video]

ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ವಿರೇಶ್‌ ಹಾಗೂ ಚನ್ನಬಸವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.‌ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಲಿಂಗಸಗೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.‌ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST