ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಸುರಿದ ಭಾರಿ ಮಳೆಗೆ ಇಡೀ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಇಂದು ಮತ್ತೊಂದು ಆತಂಕಕಾರಿ ವರದಿ ನೀಡಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
https://youtube.com/shorts/kyCvsHqiQGo?si=nJJlDvHSinV9sq-D
ಏಪ್ರಿಲ್ 30ರಂದು ಬೆಂಗಳೂರು, ಮೈಸೂರು, ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ ಸೇರಿ ರಾಜ್ಯದ 29 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ನೀಡಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗುವ ಸಂಭವವಿದೆ.
ಮೇ 1ರಂದು ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.
ಮೇ 2ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ಕೊಡಗು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮೇ 3ರಂದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಕೊಡಗು, ಮೈಸೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.